ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ – ಬಿ ರಮಾನಾಥ ರೈ ಆಕ್ರೋಶ

0
200

ಬಂಟ್ವಾಳ : ಬಿ ಸಿ ರೋಡಿನ ಇಂದಿರಾ ಕ್ಯಾಂಟೀನಿನ ನೌಕರರಿಗೆ 4-5 ತಿಂಗಳುಗಳಿಂದ ಕ್ಯಾಂಟೀನ್ ಗುತ್ತಿಗೆದಾರರು ನೌಕರರಿಗೆ ವೇತನ ನೀಡದೆ ಈಗಾಗಲೇ 5-6 ದಿನಗಳಿಂದ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ನಲ್ಲಿ ಇರುವ ಇಂದಿರಾ ಕ್ಯಾಂಟೀನ್ ಅನ್ನು ನೌಕರರು ಮುಚ್ಚಿದ್ದು ಆದ್ದರಿಂದ ನಿರ್ಗತಿಕರು ಬಡವರು ಕೆಲವು ಕೂಲಿ ಕಾರ್ಮಿಕರು ಹಸಿವಿನಿಂದ ಊಟ ಸಿಕದೆ ಪರದಾಡುವ ಸ್ಥಿತಿ ಎದುರಾಗಿದೆ ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಇಂದಿರಾ ಕ್ಯಾಂಟೀನ್ ನೌಕರರ ಸಂಕಷ್ಟಕ್ಕೆ ಸ್ಪಂದಿಸಿ ಆಹಾರ ಕಿಟ್ ಕೊಡುವ ಭರವಸೆ ನೀಡಿದರು. ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯೆಕ್ತ ಪಡಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಶ್ ಶೆಟ್ಟಿ, ಎಂ ಎಸ್ ಮೊಹಮ್ಮದ್,ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಬ್ಲಾಕ್ ಸಹಾಯ ಹಸ್ತದ ಉಸ್ತುವಾರಿಯಾದ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ,ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾದ ರೋಷನ್ ರೈ,ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ,ಪುರಸಭಾ ಸದಸ್ಯರಾದ ಸಿದ್ಧಿಕ್ ಗುಡ್ಡೆಯಂಗಡಿ, ಮೊಹಮ್ಮದ್ ನಂದಾವರ ಮೊದಲಾದವರು ಉಪಸ್ಥಿತರಿದ್ದರು.