ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ರಸ್ತೆ ದಾಡುತ್ತಿದ್ದ ಮಹಿಳೆ ಮತ್ತು ಪುಟ್ಟ ಮಗುವಿನ ಮೇಲೆ ಹರಿದ ಬಸ್ಸ್

0
320

ಉಪ್ಪಿನಂಗಡಿ : ಚಲಿಸುತ್ತಿದ್ದ ಬಸ್ಸಿನಡಿಗೆ ಸಿಲುಕಿ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅ. 11 ರ ಮಂಗಳವಾರ ನಡೆದಿದೆ. ತಾಯಿ-ಮಗು ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಧಿಡೀರನೆ ಆಗಮಿಸಿದ ಕೆಎಸ್ಆರ್ ಟಿಸಿ ಬಸ್ ಚಲಿಸಿ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಸಿದ್ದೀಕ್ ಎಂಬವರ ಪತ್ನಿ ಸಾಹಿದಾ(25) ವರ್ಷ ಸಾಹಿಲ್ (1) ಎಂಬರವಾಗಿರುತ್ತಾರೆ. ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.