ಉಪ್ಪಿನಂಗಡಿ : ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ : ಕ್ಯಾಂಪಸ್ ಫ್ರಂಟ್ ನಿಯೋಗ ಭೇಟಿ

0
198

ಉಪ್ಪಿನಂಗಡಿ : ಕ್ಷುಲ್ಲಕ ವಿಚಾರವನ್ನು ಮುಂದಿಟ್ಟು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದ್ದು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಿಯೋಗವು ವಿದ್ಯಾರ್ಥಿಗಳನ್ನು ಭೇಟಿ ಮಾಡಿತು. ಹಲ್ಲೆಗೊಳಗಾದ ವಿದ್ಯಾರ್ಥಿಗಳು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದ.ಕ ಜಿಲ್ಲೆಯಾದ್ಯಂತ ಅನೈತಿಕ ಪೊಲೀಸ್ ಗಿರಿ ಪ್ರರಕರಣಗಳು ಹೆಚ್ಚುತ್ತಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಬೇಕೆಂದು ಕ್ಯಾಂಪಸ್ ಫ್ರಂಟ್ ನಿಯೋಗವು ಆಗ್ರಹಿಸಿದೆ.

ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ರಿಯಾಝ್ ಅಂಕತಡ್ಕ, ಉಪ್ಪಿನಂಗಡಿ ಅಧ್ಯಕ್ಷರಾದ ರಿಝ್ವಾನ್ ಗೋಳಿತೊಟ್ಟು, ಪುತ್ತೂರು ಕಾರ್ಯದರ್ಶಿ ಮುಸ್ತಫಾ ಕೊಡಿಪ್ಪಾಡಿ, ಸಮಿತಿ ಸದಸ್ಯರಾದ ಫಾರೂಕ್ ಕಬಕ ಉಪಸ್ಥಿತರಿದ್ದರು.