ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಾಗಿ ಎನ್.ಕೆ.ಎಮ್.ಶಾಫಿ ಸಅದಿ ಆಯ್ಕೆ

0
170

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷ ರಾಗಿ ಶಾಫಿ ಸಅದಿ ಆಯ್ಕೆಯಾಗಿದ್ದಾರೆ. ಇಂದು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೌಲಾನ ಶಾಫಿ ಸಅದಿ ಆಯ್ಕೆಯಾಗಿದ್ದಾರೆ.

ವಕ್ಫ್ ಮಂಡಳಿ ಅದ್ಯಕ್ಷರಾಗಿದ್ದ ಮುಹಮ್ಮದ್ ಯೂಸುಫ್ ಅವರ ನಿಧನದ ಬಳಿಕ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್, ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್, ಶಾಸಕಿ ಕನೀಝ್ ಫಾತಿಮಾ ಹಾಗೂ ಸದಸ್ಯರಾದ ಅಬ್ದುಲ್ ರಿಯಾಝ್ ಖಾನ್, ಯಾಕೂಬ್ ಇತರರಿದ್ದರು.