ಡಿ. 31ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳ ಕರೆ

0
199

ಬೆಂಗಳೂರು : ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಪುಂಡಾಟಿಕೆಯನ್ನು ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೊಸ ವರ್ಷ ಮುನ್ನಾದಿನ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕರ್ನಾಟಕ, ಕನ್ನಡ ನಾಡು ನುಡಿಯ ಒಗ್ಗಟ್ಟಿಗೆ ಕನ್ನಡಿಗರು ಈ ಸಂದರ್ಭದಲ್ಲಿ ಒಟ್ಟಾಗಿ ಶಕ್ತಿಯನ್ನು ಪ್ರದರ್ಶಿಸಬೇಕು. 25ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕನ್ನಡಿಗರೆಲ್ಲರೂ ನಮಗೆ ಬೆಂಬಲ ನೀಡಬೇಕು. ಡಿಸೆಂಬರ್ 31ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆಲ್ಲಾ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ ಎಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಇಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.