ನಾಡೋಜ ಡಾ. ಚೆನ್ನವೀರ ಕಣವಿ ನಿಧನಕ್ಕೆ ಡಿ.ಐ. ಅಬೂಬಕರ್ ಕೈರಂಗಳ ಸಂತಾಪ

0
126

ಮಂಗಳೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ಅವರ ನಿಧನಕ್ಕೆ ಗುರುಕುಲ ಕಲಾ ಪ್ರತಿಷ್ಠಾನದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಐ. ಅಬೂಬಕರ್ ಕೈರಂಗಳ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುದೀರ್ಘ ಕಾಲ ಕನ್ನಡ ಸಾಹಿತ್ಯ ರಂಗದಲ್ಲಿ ಸೇವೆ ಸಲ್ಲಿಸಿದ ಚೆನ್ನವೀರ ಕಣವಿ ಅವರು ತಮ್ಮ ಸಾಹಿತ್ಯದ ಮೂಲಕ ಸಮಾಜವನ್ನು ಕಟ್ಟಿ ಬೆಳೆಸಲು ಅಪಾರ ಕೊಡುಗೆಯನ್ನು ನೀಡಿದ್ದಾರೆ. ತಮ್ಮ ಕವನಗಳ ಮೂಲಕ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಅವರ ವಿಯೋಗ ಕನ್ನಡ ನಾಡಿಗೆ ತುಂಬಲಾರದ ನಷ್ಟ ತಂದಿದೆ. ಅವರ ಸೇವೆಯನ್ನು ಹಾಗೂ ಸಂದೇಶವನ್ನು ನವ ತಲೆಮಾರಿಗೆ ಪರಿಚಯಿಸುವ ಕೆಲಸ ಮಾಡಬೇಕಾಗಿದೆ. ಫೆಬ್ರವರಿ 20 ಆದಿತ್ಯವಾರದಂದು ಮಂಗಳೂರು ಟ್ಯಾಲೆಂಟ್‌ ರಿಸರ್ಚ್ ಫೌಂಡೇಶನ್ ಸಂಭಾಗಣದಲ್ಲಿ ಮಧ್ಯಾಹ್ನ 1:30ಕ್ಕೆ ನಡೆಯಲಿರುವ ಗುರುಕುಲ ಕಲಾ ಪ್ರತಿಷ್ಠಾನದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕ್ರಮದಲ್ಲಿ ಅಗಲಿದ ಆ ಮಹಾನ್ ಚೇತನಕ್ಕೆ ನುಡಿನಮನ ಸಲ್ಲಿಸಲಾಗುವುದು ಎಂದು ಡಿ.ಐ. ಅಬೂಬಕರ್ ಕೈರಂಗಳ ಪ್ರಕಟಣೆಯಲ್ಲಿ ತಿಳಿಸಿದರು.