ನಾರಾಯಣ ಗುರು ಸ್ತಬ್ಧಚಿತ್ರ ತಿರಸ್ಕಾರ: ನಾಳೆ ಕೇಂದ್ರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ

0
219

ಮಂಗಳೂರು: ಸಮಾಜ ಸುಧಾರಕ, ಹಿಂದೂ ಧರ್ಮದ ರಕ್ಷಕ ಸರ್ವ ಜನರಿಂದಲೂ ಗೌರವಿಸಲ್ಪಡುವ ಮಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಪ್ರತಿಮೆ ಹೊಂದಿದ ಗಣರಾಜ್ಯೋತ್ಸವ ಪರೇಡಿಗಾಗಿ ಕೇರಳ ಸರ್ಕಾರ ನಿರ್ಮಾಣ ಮಾಡಿದ್ದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವ ನಡೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಂಗಳವಾರ ಕಾಲ್ನಡಿಗೆ ಜಾಥಾಗೆ ಕರೆ ನೀಡಿದೆ.

ಬ್ರಹ್ಮಶ್ರೀ ನಾರಾಯಣ ಗುರು ಅವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿರುವುದು ನಮಗೆ ದಿಗ್ಭ್ರಮೆ ಮತ್ತು ಅತ್ಯಂತ ನೋವುಂಟು ಮಾಡಿದೆ. ಇದು ಜಾತಿ ಧರ್ಮದ ಮಿತಿಯನ್ನು ಮೀರಿ ಸಮಸ್ತ ನಾರಾಯಣ ಗುರು ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ. ಕೇಂದ್ರ ಸರಕಾರವು ತನ್ನ ಈ ನಿರ್ಧಾರವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಜ.18 ರಂದು ಮಧ್ಯಾಹ್ನ 12 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬಂಟ್ಸ್ ಹೋಸ್ಟೆಲ್, ಪಿ.ವಿ.ಎಸ್, ಡೊಂಗರಕೇರಿ, ನ್ಯೂ ಚಿತ್ರ ಟಾಕೀಸ್ ಮಾರ್ಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.