ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

0
173

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರ ಮೊಮ್ಮಗಳು ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಗರದಲ್ಲಿ ಸಂಭವಿಸಿದೆ.

ಕೌಟುಂಬಿಕ ಕಲಹದಿಂದ ಸೌಂದರ್ಯ(30) ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಬಿಎಸ್‌ವೈ ಅವರ ಹಿರಿಯ ಪುತ್ರಿ ಪದ್ಮಾವತಿ ಅವರ ಪುತ್ರಿ ಸೌಂದರ್ಯ ಅವರಿಗೆ ಕಳೆದ ವರ್ಷವಷ್ಟೇ ವಿವಾಹವಾಗಿತ್ತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

ಎಂಎಸ್​ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರನ್ನು ಡಾ.ನೀರಜ್​ ಜತೆ ಮದುವೆ ಮಾಡಿಕೊಡಲಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.