ಮೇಕೆದಾಟು ಯೋಜನೆ ಬಗ್ಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು?

0
263

ಮೈಸೂರು : ಕಾವೇರಿ ನೀರು ಬಿಡುವ ಮತ್ತು ಮೇಕೆದಾಟು ಯೋಜನೆ ಬಗ್ಗೆ ರೈತರು ಹಾಗೂ ಜನರಿಗೆ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಕಾವೇರಿ ನೀರು ಹಾಗೂ ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ರೈತರು ಹಾಗೂ ರಾಜ್ಯದ ಜನರ ಹಿತ ಕಾಯಲಿದೆ.ರಾಜ್ಯದ ಜನರಿಗೆ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.