ಮೈಸೂರು ರೇಪ್ ಪ್ರಕರಣ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಇಕ್ಬಾಲ್ ಅಹ್ಮದ್ ಮುಲ್ಕಿ ರಾಜ್ಯ ಸರ್ಕಾರಕ್ಕೆ ಆಗ್ರಹ

0
218

ರಾಜ್ಯದ ಸಾಂಸ್ಕೃತಿಕ ನಗರಿ, ವಿಶ್ವಾವಿಖ್ಯಾತ ಪ್ರವಾಸಿ ತಾಣ ಮೈಸೂರಿನಲ್ಲಿ ಹಾಡುಹಾಗಲೇ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ರಾಜ್ಯದ ಇತಿಹಾಸಕ್ಕೆ ಮಸಿ ಬಳಿದಂತಾಗಿದೆ. ಈ ದುಷ್ಕೃತ್ಯ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕೆಂದು ಜೆಡಿಎಸ್ ರಾಜ್ಯ ಪ್ರ. ಕಾರ್ಯದರ್ಶಿ ಇಕ್ಬಾಲ್ ಅಹ್ಮದ್ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ಅಗ್ರಹಿಸಿದ್ದಾರೆ.

ರಾಜ್ಯದ ವಿವಿಧೆಡೆ ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಅತ್ಯಾಚಾರ ಘಟನೆಗಳನ್ನು ತಡೆಗಟ್ಟಲು ಕೃತ್ಯ ನಡೆಸಿದವರ ಮೇಲೆ ಯಾವುದೇ ಕನಿಕರವನ್ನು ತೋರಿಸದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಅಗ್ರಹಿಸಿದರು.