ವೈದ್ಯಕೀಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ್ದ ಹಿರಿಯ ವೈದ್ಯರಿಗೆ ಅಭಿನಂದನಾ ಕಾರ್ಯಕ್ರಮ

0
231

ಮಂಗಳೂರು : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಯುನೈಟೆಡ್ ಚಾರಿಟೇಬಲ್ ಟ್ರಸ್ಟ್ ಜಂಟಿಯಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ್ದ ಹಿರಿಯ ವೈದ್ಯರಿಗೆ ಅಭಿನಂದನೆ ಕಾರ್ಯಕ್ರಮ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆಯಿತು.

ಯೆನೆಪೋಯ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ||ವಿಜಯ ಕುಮಾರ್.ಸೇರಿದಂತೆ ಇನ್ನಿತರ ಗಣ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಕೊರೊನಾ ಕಾಲಘಟ್ಟದಲ್ಲಿ ವೈದ್ಯರ ಸಲ್ಲಿಸಿದ ಸೇವೆ ಪ್ರಶಂಸೆಯ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಯುನೈಟೆಡ್ ಚಾರಿಟೇಬಲ್ ಟ್ರಸ್ಟ್ ಜಂಟಿಯಾಗಿ ವೈದ್ಯರಿಗೆ ಅಭಿನಂದನೆ ಸಲ್ಲಿಸುವುದರಿಂದ ಮುಂದಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಮತ್ತಷ್ಟು ಪುಷ್ಟಿ ಕೊಡುವಂತೆ ಆಗಲಿದೆ ಎಂದರು.ಇನ್ನೂ ಕಾರ್ಯಕ್ರಮದಲ್ಲಿ. ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ,ನಿತ್ಯಾನಂದ ಶೆಟ್ಟಿ, ಮಹಮ್ಮದ್ ಖುನ್ನಿ, ಜಮಾಲ್, ಶಾಂತರಾಮ್ ಶೆಟ್ಟಿ,ರೂಪಾ ಡಿ.ಬಂಗೇರ ಇನ್ನಿತರರು ಉಪಸ್ಥಿತಿಯಿದ್ದರು.