ಶಿರವಸ್ತ್ರ ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿನಿಯರನ್ನು ತಡೆದಿರುವುದಕ್ಕೆ ಡಾ! ಸುಮತಿ ಹೆಗ್ಡೆ ಆಕ್ಷೇಪ

0
210

ಮಂಗಳೂರು : ಕಳೆದ ಹಲವಾರು ವರ್ಷಗಳಿಂದ ಶಿರವಸ್ತ್ರ ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ಏಕಾಏಕಿ ತಡೆದಿರುವುದಕ್ಕೆ ಡಾ! ಸುಮತಿ ಹೆಗ್ಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಾಹ್ಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಕಳೆದ ಹಲವಾರು ವರ್ಷಗಳ ಹಿಂದಿನ ಪದ್ಧತಿಯನ್ನು ಮುರಿದು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧಿಸಿರುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನು ಸೂಕ್ಷ್ಮ ವಿಚಾರಗಳನ್ನು ಸರಕಾರ ಸಮರ್ಪಕವಾಗಿ ನಿಭಾಯಿಸಬೇಕು. ವಿದ್ಯಾರ್ಥಿಗಳಾ ಭವಿಷ್ಯದ ಹಿತದೃಷ್ಠಿಯಿಂದ ಈ ಹಿಂದೆ ಇದ್ದ ಪದ್ಧತಿಯನ್ನೇ ಮುಂದುವರೆಸಲು ಅವಕಾಶವನ್ನು ಮಾಡಿಕೊಡಬೇಕು. ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಗಳು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಜೆಡಿಎಸ್ ಜಿಲ್ಲಾ ಮಹಿಳಾ ಅಧ್ಯಕ್ಷೆ ಡಾ! ಸುಮತಿ ಹೆಗ್ಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.