79ನೇ ವಸಂತಕ್ಕೆ ಕಾಲಿಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಹುಟ್ಟುಹಬ್ಬದ ಸಂಭ್ರಮ. 79ನೇ ವಸಂತಕ್ಕೆ ಕಾಲಿಟ್ಟ ಬಿಎಸ್​ವೈ ಅವರಿಗೆ, ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ನಾಯಕರು, ಅಭಿಮಾನಿಗಳು ಜನ್ಮದಿನದ ಶುಭಾಶಯ ಕೋರಿದ್ದಾರೆ.

ಯಡಿಯೂರಪ್ಪ ಓರ್ವ ಅನುಭವಿ ನಾಯಕರಾಗಿದ್ದು, ತಮ್ಮ ಜೀವನವನ್ನು ರೈತರು ಹಾಗೂ ಬಡವರ ಹಿತರಕ್ಷಣೆಗೆ ಮುಡಿಪಾಗಿಸಿದ್ದಾರೆ. ಅವರ ಸುದೀರ್ಘ ಆರೋಗ್ಯ ಜೀವನಕ್ಕೆ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಕೇಂದ್ರದ ಹಲವು ಸಚಿವರು ಯಡಿಯೂರಪ್ಪರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಇತ್ತ ರಾಜ್ಯ ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಬಿಜೆಪಿ ಶಾಸಕರು, ಸಚಿವರು ಟ್ವೀಟ್ ಮಾಡಿ, ಬಿಎಸ್​ವೈಗೆ ವಿಶ್​ ಮಾಡಿದ್ದಾರೆ. ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ನಾಯಕರು ಸಿಎಂ ಕಾವೇರಿ ನಿವಾಸಕ್ಕೆ ಆಗಮಿಸಿ, ಯಡಿಯೂರಪ್ಪ ಅವರಿಗೆ ಹೂ ಗುಚ್ಛ ನೀಡಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here