ಬ್ಯಾರಿ ಅಕಾಡೆಮಿ ನೀಡಿದ ಪುರಸ್ಕಾರದಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ: ಡಾ.ಇಸ್ಮಾಯಿಲ್ ಹೆಜಮಾಡಿ

B ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2020 ನೇ ಸಾಲಿನ ಗೌರವ ಪುರಸ್ಕಾರವನ್ನು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಇಸ್ಮಾಯಿಲ್ ಹೆಜಮಾಡಿ ಇವರಿಗೆ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರದಾನ‌ ಮಾಡಲಾಯಿತು. ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ್ದ ಕಾರಣ
ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮಕ್ಕೆ ಬರಲು ಅನಾನುಕೂಲವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಲ್ಲಿ ಸನ್ಮಾನಿಸಲಾಯಿತು. ಗೌರವ ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ರಹೀಂ ಉಚ್ಚಿಲ್, ಕೋವಿಡ್ -19 ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ವೈದ್ಯಕೀಯ ಸೇವೆಯನ್ನು ಸಲ್ಲಿಸುತ್ತಾ ಜನಮನ‌ ಗೆದ್ದಿರುವ ಡಾ.ಇಸ್ಮಾಯಿಲ್ ರವರ ಸಾಧನೆಯನ್ನು ಅಕಾಡೆಮಿ ಗುರುತಿಸಿರುವುದು ಹೆಮ್ಮೆ ತಂದಿದೆ ಎಂದು ನುಡಿದರು.

ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಡಾ.ಇಸ್ಮಾಯಿಲ್, ಈ ಪ್ರತಿಷ್ಟಿತ ಪುರಸ್ಕಾರ ಪಡೆದಿರುವುದರಿಂದ್ದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಮುಂದೆಯೂ ಪ್ರಾಮಾಣಿಕವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತೇನೆ. ಗೌರವ ಪುರಸ್ಕಾರ ನೀಡಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಅಂದರು. ಕರ್ನಾಟಕ ‌ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಶಂಶೀರ್ ಬುಡೋಳಿ ಪುರಸ್ಕಾರ ಪತ್ರ ವಾಚನ ಮಾಡಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಡಾ.ನಜೀಬ್ ಬೆಝಾದ್, ರಮೇಶ್ ಭಟ್,
ವಿಜಯ್, ಬಶೀರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here