ಕರಾವಳಿ

ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಂತ ಅಧಿಕಾರಿಗಳಿಗೆ ಮನವಿ

ದ.ಕ : ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುವ ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಹಾಗೂ ತಾಲೂಕುವಾರು ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ ತಹಶೀಲ್ದಾರುಗಳಿಗೆ ಮನವಿ ಸಲ್ಲಿಸಲಾಯಿತು.

ಸಮಾಜದಲ್ಲಿ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರು ಬೀದಿ ಪಾಲಾಗಿದ್ದಾರೆ. ಲಾಕ್‌ಡೌನ್‌ ನಂತರ ಸರಿಯಾದ ವೇತನ ಪಾವತಿಯಾಗದೆ ಪರಿತಪಿಸುತ್ತಿದ್ದಾರೆ. ಕಳೆದ 18 ತಿಂಗಳುಗಳಿಂದ ಯಾವುದೇ ವರಮಾನವಿಲ್ಲದೆ ತಮ್ಮ ಜೀವನೋಪಾಯಕ್ಕಾಗಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ ಹಾಗಾಗಿ ಸರ್ಕಾರ ಈ ಎಲ್ಲಾ ಸಮಸ್ಯೆಯನ್ನು ಮನಗಂಡು ಅತಿಥಿ ಶಿಕ್ಷಕರನ್ನು ಖಾಯಂ ಆಗಿ ಭಡ್ತಿ ನೀಡಬೇಕು ಹಾಗೂ ಬಾಕಿಯಿರುವ ವೇತನ ಬಿಡುಗಡೆಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾ ಮುಖಂಡರಾದ ಹಸನ್ ಸಿರಾಜ್, ಅಶ್ರಫ್ ಪೊರ್ಕೊಡಿ,ಮುಸ್ತಫಾ ಪುತ್ತೂರು , ಗೌಸಿಯಾ , ಸಾದಿಯಾ, ನಬೀಲ್ ಮೂಡಬಿದ್ರೆ, ಸದಾಫ್ ಬೆಳ್ತಂಗಡಿ ಮತ್ತಿತರರು ಉಪಸ್ಥಿತರಿದ್ದರು.

Related Articles

Back to top button