ಕರಾವಳಿ
ಆಗಸ್ಟ್ 30ರ ತನಕ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.
ದ.ಕ. ಜಿಲ್ಲೆಯಲ್ಲಿ ಆಗಸ್ಟ್ 30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಆಗಸ್ಟ್ 30 ಬೆಳಗ್ಗೆ 6ರ ತನಕ ಹೊಸ ಆದೇಶ ಅನ್ವಯವಾಗಲಿದೆ. ಜಿಲ್ಲೆಯಲ್ಲಿರುವ ಎಲ್ಲಾ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು. ಆದರೆ, ಸೋಮವಾರದಿಂದ ಶುಕ್ರವಾರ ತನಕ ರಾತ್ರಿ 7ರ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ ಕರ್ಫ್ಯೂ ಆಗಸ್ಟ್ 30ರ ತನಕ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಮತ್ತೊಂದೆಡೆ, ಈ ಹಿಂದಿನ ಆದೇಶಗಳೇ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.