ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಭಾನುವಾರ ಆದೇಶ ಹೊರಡಿಸಿದ್ದು, ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ.
ಜಗದೀಶ್ ಅವರನ್ನು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ಕೂರ್ಮಾ ರಾವ್ ಅವರನ್ನು ಉಡುಪಿ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಯಶವಂತ್ ವಿ. ಗಾಂವ್ಕರ್ ಅವರನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರನ್ನಾಗಿ ನೇಮಿಸಲಾಗಿದೆ.