ರಾಷ್ಟ್ರೀಯ

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ನನ್ನ ಕನಸಾಗಿತ್ತು – ಕನ್ಹಯ್ಯಾ ಕುಮಾರ್

ನವದೆಹಲಿ: ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಇದು ಕೇವಲ ಪಕ್ಷವಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ನನ್ನ ಕನಸಾಗಿತ್ತು ಎಂದು ಎಐಸಿಸಿ ಕಚೇರಿಯಲ್ಲಿ ಕನ್ಹಯ್ಯಾ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಅತ್ಯಂತ ಹಳೆಯ ಮತ್ತು ಪ್ರಜಾಪ್ರಭುತ್ವ ಪಕ್ಷವಾಗಿದೆ. ನಾನು ಪ್ರಜಾಪ್ರಭುತ್ವಕ್ಕೆ ಒತ್ತು ನೀಡುತ್ತೇನೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶ ಉಳಿಯಲು ಸಾಧ್ಯವಿದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ಹೇಳಿದ್ದಾರೆ.

ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಬಿಹಾರ ಸಿಪಿಐ ಯುವ ನಾಯಕ ಕನ್ಹಯ್ಯಾ ಕುಮಾರ್ ಅವರು ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಾಯಕರಾದ ಸುರ್ಜೇವಾಲ ಮತ್ತು ವೇಣುಗೋಪಾಲ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Related Articles

Back to top button