Uncategorized
ಕಾರಿನ ಡಿಕ್ಕಿಯಲ್ಲಿ ಲಾಕ್ ಮಾಡಿ ಬಿಜೆಪಿ ನಾಯಕನ ಸಜೀವ ದಹನ: ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಜನತೆ
ಹೈದರಬಾದ್: ತೆಲಂಗಾಣದ ಸ್ಥಳೀಯ ಬಿಜೆಪಿ ನಾಯಕನನ್ನು ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್ ಮಾಡಿ ಕೆಲ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆಯ ಬಗ್ಗೆ ಮಾತನಾಡಿರುವ ಮೇದಕ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ಕೆಲವು ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕನನ್ನು ಕಾರಿನ ಲಾಕ್ ಮಾಡಿ ಬೆಂಕಿ ಹಚ್ಚಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ತನಿಖೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)