ಕ್ರೀಡೆ

ಕೋವಿಡ್ ಭೀತಿ ಹಿನ್ನೆಲೆ : ಭಾರತ – ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ ರದ್ದು

ನವ ದೆಹಲಿ : ಮ್ಯಾಂಚೆಸ್ಟರ್‌ ನಲ್ಲಿ ಇಂದು (ಶುಕ್ರವಾರ) ನಡೆಯಬೇಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB) ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ. ಟೀಂ ಇಂಡಿಯಾ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯ ರದ್ದು ಗೊಳಿಸಲು ಬಿಸಿಸಿಐ ನಿರ್ಧರಿಸಿದೆ. ಆಟಗಾರರ ಸುರಕ್ಷತೆಯಿಂದ ಬಿಸಿಸಿಐ ಇಂದು ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಿದೆ…

ಟೀಂ ಇಂಡಿಯಾ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಬಿಸಿಸಿಐ ಆಟಗಾರರ ಸುರಕ್ಷತಾ ದೃಷ್ಟಿಯಿಂದ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ನಡೆಯಬೇಕಿದ್ದ ಕೊನೆಯ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲು ನಿರ್ಧಾರ ಕೈಗೊಂಡಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಕಾಯ್ದುಕೊಂಡಿದೆ.

Back to top button