
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳನ್ನು ಅಪಹರಿಸಿದ ತಂಡವೊಂದು ಅತ್ಯಾಚಾರ ನಡೆಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಒಂದಕ್ಕಿಂತ ಹೆಚ್ಚು ಮಂದಿ ಇದ್ದ ಆರೋಪಿಗಳು ಬಾಲಕಿಯನ್ನು ಕರೆದೊಯ್ದು ಆಕೆಯ ಅರಿವಿಲ್ಲದಂತೆ ಮಾಡಿ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಕುರಿತ ಬಾಲಕಿಯ ಹೇಳಿಕೆ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಬೆಳಗ್ಗೆ ಆಕೆಯನ್ನು ಕರೆದುಕೊಂಡು ಹೋಗಿ ಕೃತ್ಯ ನಡೆಸಿ, ಬ್ರಹ್ಮರಕೂಟ್ಲು ಬಳಿ ಬಿಟ್ಟುಹೋಗಿದ್ದಾರೆ ಎಂಬ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರನ್ನು ಸಂಪರ್ಕಿಸಿದಾಗ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.