ಕರ್ನಾಟಕಹಾಸನ

ಗುಂಡಿನ ದಾಳಿಗೆ ಸಂಘ ಪರಿವಾರದ ಕಾರ್ಯಕರ್ತ ಬಲಿ, ಇಬ್ಬರು ಗಂಭೀರ

ಹಾಸನ‌ : ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದ ಹೊರವಲಯದಲ್ಲಿ ಗುಂಡಿನ ದಾಳಿ ನಡೆದಿದೆ. ನವೀನ್ ಸೇರಿದಂತೆ ನಾಲ್ವರು ಮೀನು ಹಿಡಿಯಲು ತೆರಳಿದ್ದ ವೇಳೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ನವೀನ್ ಜೊತೆಯಲ್ಲಿ ಅವರ ಗೆಳೆಯರಾದ ದಯಾನಂದ್​, ಪದ್ಮನಾಭ್, ರಾಜಾಚಾರಿ ಇದ್ದರು. ಈ ದಾಳಿಯಲ್ಲಿ ದಯಾನಂದ್ ಮತ್ತು ಪದ್ಮಾನಾಭ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತ ನವೀನ್ ಬಿಜೆಪಿ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತನಾಗಿದ್ದ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರಿಂದ ತನಿಖೆ ತೀವ್ರ : ಬೇಟೆಗೆ ತೆರಳಿದ್ದವರು ಸಿಡಿಸಿದ ಗುಂಡಿನ ದಾಳಿಯೋ ಅಥವಾ ಹತ್ಯೆ ಮಾಡಲೆಂದು ನಡೆಸಿದ ಗುಂಡಿನ ದಾಳಿಯೊ ಎಂಬ ಬಗ್ಗೆ ಪೊಲೀಸರು ತನಿಖೆಯನ್ನ ನಡೆಸುತ್ತಿದ್ದಾರೆ.

ಸ್ಧಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು : ಬೆಳಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿ ರಾತ್ರಿಯೆಲ್ಲಾ ಪೊಲೀಸರನ್ನು ನಿಯೋಜಿಸಲಾಗಿತ್ತು. ಈ ಸಂಬಂಧ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಾಣಿಗಳ ಬೇಟೆಗೆ ಬಂದ ತಂಡದಿಂದಲೇ ಈ ಗುಂಡಿನ ದಾಳಿ ನಡೆದಿದೆ ಎಂದು ಶಂಕೆ ವ್ಯಕ್ತವಾಗಿವೆ. ಆದ್ರೆ ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Related Articles

Back to top button