ರಾಷ್ಟ್ರೀಯ
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 44,658 ಜನರಲ್ಲಿ ಹೊಸ ಸೋಂಕು ಪತ್ತೆ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮೂರನೇ ಅಲೆ ಆತಂಕ ಎದುರಾಗಿದೆ. ಕಳೆದ 24 ಗಂಟೆಯಲ್ಲಿ 44,658 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 496 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 436861 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 344899 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 32988 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31821428 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 18,24,931 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 79,48,439 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 61,22,08,542 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.