ಕರಾವಳಿಮಂಗಳೂರು

ದ. ಕ. ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಇಕ್ಬಾಲ್ ಅಹ್ಮದ್ ಮುಲ್ಕಿ ನೇಮಕ

ಮಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಆದೇಶದಂತೆ ದ.ಕ. ಜಿಲ್ಲಾ ಜಾತ್ಯತೀತ ಜನತಾದಳದ ಅಧ್ಯಕ್ಷ ಜಾಕೆ ಮಾಧವ ಗೌಡ ಅವರು ಇಕ್ಬಾಲ್ ಅಹ್ಮದ್ ಮುಲ್ಕಿ ಅವರನ್ನು ದ.ಕ. ಜಿಲ್ಲಾ ಜಾತ್ಯತೀತ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ.

ಜನತಾ ಪರಿವಾರ ಮತ್ತು ಜನತಾದಳ ಸಂಘಟನೆಯಲ್ಲಿ ಸುಮಾರು 30 ವರ್ಷಗಳಿಂದ ಸಕ್ರಿಯವಾಗಿದ್ದುಕೊಂಡು ಇವರು ಹಲವು ಸಂಘ ಸಂಸ್ಥೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನೀರ್ವಹಿಸಿದ್ದು ಅದರಲ್ಲಿ ಪ್ರಮುಖವಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಲ್ಲದೆ ಮುಲ್ಕಿ ಶಾಫಿ ಮಸೀದಿಯ ಮಾಜಿ ಅಧ್ಯಕ್ಷರಾಗಿ, ಎಸ್ ವೈ ಎಸ್ ಮೂಲ್ಕಿ ರೇಂಜ್ ಅಧ್ಯಕ್ಷರಾಗಿ, ಸಂವಿಧಾನ ಸಂರಕ್ಷಣಾ ವೇದಿಕೆ ಮೂಲ್ಕಿ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ ಹಾಗೂ ಪಕ್ಷ ಸಂಘಟನೆಯಲ್ಲಿ ಅಪಾರ ಅನುಭವವನ್ನು ಹೊಂದಿರುತ್ತಾರೆ. ಇವರ ಸೇವೆಯನ್ನು ಗಮನಿಸಿ ಪಕ್ಷ ಈಗ ದ.ಕ. ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶವನ್ನು ಹೊರಡಿಸಿದೆ.

Related Articles

Back to top button