ಬೆಂಗಳೂರು

ಮಾಜಿ ಕೇಂದ್ರ ಸಚಿವರಿಗೆ ‘ವಿಡಿಯೋ’ ಸಂಕಷ್ಟ : ಪೊಲೀಸ್ ಆಯುಕ್ತರಿಗೆ ದೂರು ನೀಡಿದ ‘ಡಿ.ವಿ ಸದಾನಂದಗೌಡ’

ಬೆಂಗಳೂರು : ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದಗೌಡರ ವಿರುದ್ಧ ವಿಡಿಯೋವೊಂದನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಡಿ ವಿ ಸದಾನಂದಗೌಡರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಪ್ ಪಂತ್ ಗೆ ದೂರು ನೀಡಿದ ಸದಾನಂದಗೌಡರು ‘ನನ್ನ ವಿರುದ್ಧ ಫ್ಯಾಬ್ರಿಕೇಟಡ್, ಫೇಕ್, ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ, ನನ್ನ ಇಮೇಜ್ ಹಾಳು ಮಾಡಲೆಂದು ಈ ವಿಡಿಯೋ ಹರಿಬಿಡಲಾಗಿದೆ’ ಎಂದು ಆರೋಪಿಸಿದ್ದಾರೆ.

‘ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ, ಇಂಪರ್ಸೊನೇಷನ್ ಮೂಲಕ ಈ ವಿಡಿಯೋ ಸಿದ್ದಪಡಿಸಲಾಗಿದೆ. ಈ ವಿಡಿಯೋ ಒಬ್ಬರಿಂದ ಒಬ್ಬರಿಗೆ ಹೋಗುವ ಮುನ್ನ ಕ್ರಮ ಕೈಗೊಳ್ಳಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

Related Articles

Back to top button