![](https://4dnews.in/wp-content/uploads/2023/02/WhatsApp-Image-2023-02-06-at-11.09.15-PM-780x470.jpeg)
ಮಂಗಳೂರು : ನಗರದ ಖಾಸಗಿ ಹಾಸ್ಟೆಲೊಂದರಲ್ಲಿ ಆಹಾರ ಸೇವನೆಯ ಬಳಿಕ ಸುಮಾರು 150ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ.
‘ಫುಡ್ ಪಾಯಿಸನ್’ ಆಗಿ ಈ ರೀತಿ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದ್ದು, ಸಂಪೂರ್ಣ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಅಸ್ವಸ್ಥಗೊಂಡಿರುವ ಎಲ್ಲ ವಿದ್ಯಾರ್ಥಿಗಳನ್ನು ನಗರದ ನಾನಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ನಗರದ ಕೆಎಂಸಿ, ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳಾ ಆಸ್ಪತ್ರೆ ಸೇರಿದಂತೆ ನಾನಾ ಖಾಸಗಿ ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಗಾಗಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.