ಕರಾವಳಿಸುರತ್ಕಲ್

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ – ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ

ಸುರತ್ಕಲ್ : ಸುರತ್ಕಲ್ ಟೋಲ್‌ಗೇಟ್ ಬಳಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಎಸಗಿರುವ ಘಟನೆಯನ್ನು ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳೂರು ಪೊಲೀಸ್ ಆಯುಕ್ತರಿಗೆ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.

ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳಾದ ರಾಕೇಶ್ ದೇವಾಡಿಗ, ಸುನೀಲ್ ಪೂಜಾರಿ, ಮುಖಂಡರಾದ ಮುಸ್ತಫಾ ಸಿಎಂ, ಇಮ್ರಾನ್ ಎಆರ್, ಸಲೀಂ ಮುಕ್ಕ, ಎಂ. ತೌಫೀಕ್, ಯೂಸುಫ್ ಉಚ್ಚಿಲ್ ಹಾಗೂ ಇನ್ನಿತರ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button