ಕರ್ನಾಟಕ
ಶೀಘ್ರವೇ ಬೊಮ್ಮಾಯಿ ನೇತೃತ್ವದ ಸರ್ಕಾರ ಪತನ : ಮಾಜಿ ಸಿಎಂ ಸಿದ್ದರಾಮಯ್ಯ
ಮಂಡ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಹೆಚ್ಚು ದಿನ ಉಳಿಯುವುದು ಅನುಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟಾಂಪ್ ನೇತೃತ್ವದ ಸರ್ಕಾರದ ಬಗ್ಗೆ ಇನ್ನು ಮೂರು ತಿಂಗಳು ಮಾತನಾಡುವುದಿಲ್ಲ. ಬೊಮ್ಮಾಯಿ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ನಾನೇನು ಜ್ಯೋತಿಷ್ಯ ಹೇಳುವುದಿಲ್ಲ. ಅವರಾಗಿಯೇ ಸರ್ಕಾರ ಬೀಳಿಸಲಿದ್ದಾರೆ ಎಂದರು.ಬೊಮ್ಮಾಯಿ ಸರ್ಕಾರವನ್ನು ನಾವಂತೂ ಬೀಳಿಸುವುದಿಲ್ಲ. ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಬಿಜೆಪಿ ಸರ್ಕಾರ ಪೂರ್ಣಾವಧಿ ಇರುವುದು ಅನುಮಾನ ಎಂದು ಹೇಳಿದರು.