ಕರ್ನಾಟಕಮೈಸೂರು

ಬಾಲ ಆರೋಪಿ ಸೇರಿ ಐವರ ಬಂಧನವಾಗಿದೆ ಡಿಜಿ‌ ಐಜಿಪಿ ಪ್ರವೀಣ್​ ಸೂದ್ ಸುದ್ದಿಗೋಷ್ಠಿಯಲ್ಲಿ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ & ಐಜಿಪಿ ಪ್ರವೀಣ್​ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ವಿದ್ಯಾರ್ಥಿನಿ ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು, ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು ಎಂದು ಮಾಹಿತಿ ನೀಡಿದ್ದಾರೆ. ಇದರಲ್ಲಿ ಒಬ್ಬ ಬಾಲ ಆರೋಪಿ (juvenile) ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು ಎಂದಿದ್ದಾರೆ.

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ ಎಂದು ಹೇಳಿದ್ದಾರೆ.

ಇದರಲ್ಲಿ ಓರ್ವ ಬಾಲ ಆರೋಪಿ ಇದ್ದರೂ ಈ ಹಿಂದಿನ ಪ್ರಕರಣಗಳಂತೆ ಆಗುವುದಿಲ್ಲ. ಏಕೆಂದರೆ, ಬಾಲಾಪರಾಧ ಕಾಯ್ದೆಯಲ್ಲೂ ಬದಲಾವಣೆ ಆಗಿದೆ. ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ಪ್ರಧಾನ ನ್ಯಾಯಾಲಯದಲ್ಲಿಯೇ ವಿಚಾರಣೆ ಆಗಲಿದೆ. 6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದಾನೆ.

ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ:
ಇವರೆಲ್ಲರೂ ಕೆಲಸಕ್ಕೆ ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ಆರೋಪಿಗಳನ್ನು ಬಂಧಿಸಿದ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸುವೆ. ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಂತ್ರಸ್ತೆ ಕಡೆಯಿಂದ ನಮಗೆ ಈ ತನಕ ಯಾವುದೇ ಮಾಹಿತಿ ಸಿಕ್ಕಿಲ್ಲ. ಯಾರೇ ಆಗಲಿ ಆ ಸಮಯದಲ್ಲಿ ಮಾಹಿತಿ ನೀಡುವುದು ಕಷ್ಟ. ಯುವತಿಯ ಸ್ನೇಹಿತ ಕೂಡಾ ಪೂರ್ಣ ಮಾಹಿತಿ ನೀಡುವ ಸ್ಥಿತಿಯಲ್ಲಿಲ್ಲ. ಸಂತ್ರಸ್ತೆ ಸ್ನೇಹಿತನ ಕಡೆಯಿಂದ ಸ್ವಲ್ಪ ಮಾಹಿತಿ ಮಾತ್ರ ಸಿಕ್ಕಿದೆ. ಬ್ಲ್ಯಾಕ್​ ಮೇಲ್ ಮಾಡಿದ ಬಗ್ಗೆ ನಮಗೆ ಮಾಹಿತಿ ಇಲ್ಲ. ಪೊಲೀಸರ ಈ ವರೆಗಿನ ತನಿಖೆಯಲ್ಲಿ ಮಾಹಿತಿ ಸಿಕ್ಕಿಲ್ಲ. ಇದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಚಾರ್ಜ್​ಶೀಟ್​​ ಸಲ್ಲಿಸಲಾಗುತ್ತದೆ. ಆದರೆ, ನ್ಯಾಯಾಲಯದಲ್ಲಿ ಹೆಚ್ಚಿನ ವಿವರ ನೀಡಬೇಕಾಗಿರುವುದರಿಂದ ಈಗಲೇ ಎಲ್ಲವನ್ನೂ ಹೇಳಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಅತ್ಯಾಚಾರ ಆರೋಪಿಗಳು ತಮಿಳುನಾಡಿನವರು

ಒಟ್ಟಾರೆಯಾಗಿ, ಆರೋಪಿಗಳು ತಮಿಳುನಾಡಿನಿಂದ ಮೈಸೂರಿಗೆ ಬಂದು ಹೋಗುತ್ತಿದ್ದರು. ಮೈಸೂರಿನ ಬಂಡೀಪಾಳ್ಯ ಮಾರುಕಟ್ಟೆಗೆ ಬಂದು ಹೋಗ್ತಿದ್ದರು. ಚಾಲಕನಾಗಿದ್ದ ಆರೋಪಿ ಆಗಾಗ ಮೈಸೂರಿಗೆ ಬಂದುಹೋಗ್ತಿದ್ದ. ಅವರೆಲ್ಲಾ ಎಲೆಕ್ಟ್ರಿಕಲ್, ಕಾರ್ಪೆಂಟಿಗ್, ಡ್ರೈವರ್​ ಕೆಲಸ ಮಾಡುತ್ತಿದ್ದರು. ಮೈಸೂರಿನಿಂದ ವಾಪಸ್ ಹೋಗುವಾಗ ಪಾರ್ಟಿ ಮಾಡ್ತಿದ್ದರು. ಮೈಸೂರಿನ ಹೊರವಲಯದಲ್ಲಿ ಮದ್ಯ ಸೇವಿಸಿ ಹೋಗ್ತಿದ್ದರು.

ಅದೇ ರೀತಿ ಆಗಸ್ಟ್ 24ರಂದು ನಿರ್ಜನ ಪ್ರದೇಶದಲ್ಲಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿಗೆ ಯುವಕ, ಯುವತಿ ಹೋಗಿದ್ರು. ಜೋಡಿಯನ್ನು ದರೋಡೆ ಉದ್ದೇಶದಿಂದ ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ, ಇದೇ ಅಂತಿಮವಲ್ಲ. ಇನ್ನೂ ಹೆಚ್ಚಿನ ತನಿಖೆ ನಂತರವಷ್ಟೇ ನಿಖರವಾಗಿ ಹೇಳಬಹುದು ಎಂಬ ಮಾಹಿತಿ ಸುದ್ದಿಗೋಷ್ಠಿಯಲ್ಲಿ ಲಭ್ಯವಾಗಿದೆ. ಜತೆಗೆ, ಈ ಆರೋಪಿಗಳು ಈ ಹಿಂದೆ ತಮಿಳುನಾಡಿನಲ್ಲಿ ಇನ್ನಿತರ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ.

Related Articles

Back to top button