ಸಿಎಂ ಆದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಬೊಮ್ಮಾಯಿ
ಮಂಗಳೂರು : ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸುಧಾಕರ್, ಶಾಸಕರಾದ ಯು.ಟಿ.ಖಾದರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಸೇರಿದಂತೆ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.