ಕರ್ನಾಟಕ

BIG NEWS : ಆಗಸ್ಟ್ 15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗಿದ್ದು, ಶ್ರಾವಣ ಮಾಸದ ಸೋಮವಾರ ಮತ್ತು ಭೀಮನ ಅಮಾವಾಸ್ಯೆ ದಿನ ಜನ ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದರು. ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾದ್ರೆ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಬಳಿಕ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ ನಿನ್ನೆ ರಾಜ್ಯಾಧ್ಯಂತ ಹೊಸದಾಗಿ 1,338 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಕೊರೋನಾ ಸೋಂಕಿತರಾದಂತ ಬೆಂಗಳೂರಿನ ಮೂವರು ಸೇರಿದಂತೆ ರಾಜ್ಯದಲ್ಲಿ 31 ಸೋಂಕಿತರು ಸಾವನ್ನಪ್ಪಿದ್ದಾರೆ.

Related Articles

Back to top button