ಕರ್ನಾಟಕಬೆಂಗಳೂರು

ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ : ಅ.18ರ ವರೆಗೆ ಸರಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ ರಾಜ್ಯ ಸರಕಾರ

ಜಾತಿ ಗಣತಿ ಕಾರ್ಯ ಪೂರ್ಣಗೊಳ್ಳದ ಕಾರಣ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಿದೆ. ಈ ಹಿಂದೆ ಅಕ್ಟೋಬರ್ 7ಕ್ಕೆ ಮುಕ್ತಾಯವಾಗಬೇಕಿದ್ದ ರಜೆಯನ್ನು ವಿಸ್ತರಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಶಿಕ್ಷಕರು ಜಾತಿ ಗಣತಿ ಸಮೀಕ್ಷೆಯಲ್ಲಿ ತೊಡಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬೆಂಗಳೂರು: ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ಈ ಮೂಲಕ ಅಕ್ಟೋಬರ್‌ 7 ಕ್ಕೆ ಮುಕ್ತಾಯವಾಗಬೇಕಿದ್ದ ರಜೆ ಅಕ್ಟೋಬರ್ 18ವರೆಗೂ ವಿಸ್ತರಣೆಯಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಜಾತಿ ಗಣತಿ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಕೈಗೊಂಡಿದ್ದಾರೆ. ನಿಗದಿತ ಕಾಲಾವಧಿಯಲ್ಲಿ ಜಾತಿ ಗಣತಿ ಕಾರ್ಯ ಪೂರ್ಣಗೊಂಡಿಲ್ಲ. ಗಣತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button