BIG NEWS : 2023ಕ್ಕೆ ಸಿದ್ಧರಾಮಯ್ಯ ವಿಪಕ್ಷ ನಾಯಕರ ಸ್ಥಾನ ಕಳೆದು ಕೊಳ್ತಾರೆ – ಸಚಿವ ST ಸೋಮಶೇಖರ್ ಭವಿಷ್ಯ
ಮಂಡ್ಯ : 2023ರ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವ, ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಮತ್ತೆ ಬಿಜೆಪಿ ಪಕ್ಷ ಭರ್ಜರಿ ಗೆಲುವನ್ನು ಸಾಧಿಸಲಿದೆ. ಸಿದ್ಧರಾಮಯ್ಯ ಆಗ ವಿಪಕ್ಷ ಸ್ಥಾನ ಕೂಡ ಕೆಳೆದುಕೊಳ್ಳಲಿದ್ದಾರೆ ನೋಡ್ತಾ ಇರಿ ಎಂಬುದಾಗಿ ಸಚಿವ ಎಸ್ ಟಿ ಸೋಮಶೇಖರ್ ಭವಿಷ್ಯ ನುಡಿದಿದ್ದಾರೆ.
ಈ ಕುರಿತಂತೆ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೊಮ್ಮಾಯಿ ಸರ್ಕಾರಕ್ಕೆ ಹೆಚ್ಚು ಆಯಸ್ಸು ಇಲ್ಲ ಎಂಬುದಾಗಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ ಅಂತ ಪ್ರಶ್ನಿಸಿದಾಗ.. ಅವರಿಗೇನ್ ಗೊತ್ತಿದೆರೀ.. ವಿರೋಧ ಮಾಡೋದು ಒಂದೇ ಗೊತ್ತಿರೋದು. ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅಧಿಕಾರಕ್ಕೆ ಬಂದ ನಂತ್ರ ಎಲ್ಲಾ ಜಿಲ್ಲೆಗಳಿಗೆ ಸಚಿವರು ಟೂರ್ ಮಾಡ್ತಾ ಇದ್ದಾರೆ. ಏನ್ ಏನ್ ಬೇಕೋ ಎಲ್ಲಾ ವ್ಯವಸ್ಥೆ ಮಾಡ್ತಾ ಇದ್ದಾರೆ ಎಂದರು.
2023ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯನವರು ವಿರೋಧ ಪಕ್ಷದ ಅಧಿಕಾರವನ್ನು ಕಳೆದುಕೊಳ್ಳುತ್ತಾರೆ ಎಂಬುದಾಗಿ ಭವಿಷ್ಯ ನುಡಿದರು.