ಕರಾವಳಿಮಂಗಳೂರು

ಕೊಳ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ | ಭರತ್ ಕುಮ್ಡೇಲು ಸಹಿತ ಹಲವರ ವಿರುದ್ಧ ಕೊಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೊಳ್ತಮಜಲು ರಹೀಂ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಭರತ್ ಕುಮ್ಡೇಲ್ ಸೇರಿ ಇತರ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಎಸ್‌ಪಿ ಹೇಳಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಸಂಬಂಧ 13 ಆರೋಪಿಗಳನ್ನು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ‌

ಈ ಪ್ರಕರಣದ ಇನ್ನೊಬ್ಬ ಆರೋಪಿ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT- 2000) ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button