ಸಿಂದಗಿಯಲ್ಲಿ ಬಿಜೆಪಿ ಭರ್ಜರಿ ಗೆಲುವು – ಅಧಿಕೃತವಾಗಿ ಘೋಷಣೆ ಮಾತ್ರ ಬಾಕಿ

ಸಿಂಧಗಿ: ಸಿಂಧಗಿ ಉಪ ಚುನಾವಣೆಯ ಮತಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ರಮೇಶ್ ಭೂಸನೂರ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಇನ್ನೇನು ಚುನಾವಣಾ ಆಯೋಗದಿಂದ ಅಧಿಕೃತವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಇದೆ.
ಆರಂಭದಿಂದಲೂ ಭಾರೀ ಮುನ್ನಡೆಯನ್ನು ಬಿಜೆಪಿ ಅಭ್ಯರ್ಥಿ ಸಿಂಧಗಿ ಉಪ ಚುನಾವಣೆಯಲ್ಲಿ ರಮೇಶ್ ಭೂಸನೂರ ಅವರು ಕಾಯ್ದುಕೊಂಡಿದ್ದರು. ಪ್ರತಿ ಸುತ್ತಿನಲ್ಲಿಯೂ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆದಿತ್ತು. ಇದರ ನಡುವೆಯೂ ಬಿಜೆಪಿ ಮೊದಲ ಸ್ಥಾನದಲ್ಲಿ, ಕಾಂಗ್ರೆಸ್ ಎರಡನೇ ಸ್ಥಾನದಲ್ಲಿ, ಜೆಡಿಎಸ್ ಮೂರನೇ ಸ್ಥಾನದಲ್ಲಿ ಮುಂದುವರೆದಿತ್ತು.
ಇದೀಗ 18ನೇ ಸುತ್ತಿನ ಮತಎಣಿಕೆ ಸಂದರ್ಭದಲ್ಲಿಯೂ ಬಿಜೆಪಿ ಅಭ್ಯರ್ಥಿರಮೇಶ್ ಭೂಸನೂರ 80,020 ಮತಗಳನ್ನು, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 52,637 ಮತ ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 3,428ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 27,383 ಮತಗಳ ಭಾರೀ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೀಗ ಗೆಲುವಿನ ಸನಿಹಕ್ಕೆ ಬಂದು ನಿಂತಿದ್ದು, ಗೆಲುವಿನ ಅಧಿಕೃತ ಘೋಷಣೆಯೊಂದೆ ಭಾಕಿಯಾಗಿದೆ.